ಹುಬ್ಬಳ್ಳಿ : ತೊಳನಕೆರೆ ಬಳಿ ನಾಲ್ವರು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡುತ್ತಿದಾಗ ವಿದ್ಯಾರ್ಥಿಗಳನ್ನ ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿತರಿಂದ 75 ಗ್ರಾಂ ವಶಪಡಿಸಿಕೊಂಡು . ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.
ಗಾಂಜಾ ಮಾರಾಟಗಾರ ದಾದಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಹಾಗೂ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ ಎಂಬ ಕಳವಳಕಾರಿ ಅಂಶ ಗೊತ್ತಾಗಿದೆ.