ಹುಬ್ಬಳ್ಳಿ; ನಗರದ ಅಪ್ಸರಾ ಚಿತ್ರಮಂದಿರದಲ್ಲಿ ನಟ ಪುನೀತ್ ರಾಜಕುಮಾರ್ಗೆ ಶ್ರದ್ಧಾಂಜಲಿ ಕಾರ್ಯಕ್ರಮ ಭಾನುವಾರ ನಡೆಯಿತು. . ಚಿತ್ರ ಪ್ರದರ್ಶಕರ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪುನೀತ್ಗೆ ನಮನಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರು ನಟ ಪುನೀತ್‌ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಿದ್ದು ಅದರಂತೆ ಸಹ ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದಲ್ಲಿ ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ಚಿತ್ರಮಂದಿರಗಳಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನದ ಮೂಲಕ ಪುಷ್ಪಾಂಜಲಿ ಹಾಗೂ ಥಿಯೇಟರ್‌ಗಳಲ್ಲಿ ಕ್ಯಾಂಡಲ್ ಹಚ್ಚಿ ದೀಪಾಂಜಲಿ ನಡೆಸಲಾಯಿತು . ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ಥಿಯೇಟರ್ ಸಿಬ್ಬಂದಿ ಹಾಗೂ ಅಭಿಮಾನಿಗಳಿಂದ ಶ್ರದ್ಧಾಂಜಲಿ ಸಲ್ಲಿಕೆ ಮಾಡಿದರು. ಪಾಲಿಕೆ ಮಾಜಿ ಸದಸ್ಯ ಪುನೀತ್ ರಾಜ್‍ಕುಮಾರ್ ಅಭಿಮಾನಿ ಶಿವಾನಂದ ಮುತ್ತಣ್ಣವರ,ಚಿತ್ರಮಂದಿರದ ವ್ಯವಸ್ಥಾಪಕ ಶಿವಾನಂದ ಚಿತ್ರಮಂದಿರದ ಸಿಬ್ಬಂದಿ ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
ಜಾಹಿರಾತು……