ಹುಬ್ಬಳ್ಳಿ : ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಖಂಡನೀಯ. ಸಿದ್ದರಾಮಯ್ಯ ಅವರು ಕೂಡಲೇ ದಲಿತರ ಕ್ಣಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ ಹಾಗೂ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ವಒತ್ತಾಯಿಸಿದರು.
ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದ ಉದ್ದೇಶ ಇಟ್ಟುಕೊಂಡು ರಮೇಶ ಜಿಗಜಣಗಿ, ಗೋವಿಂದ ಕಾರಜೋಳ ಅವರು ಬಂದಿದ್ದಾರೆ. ಆದ್ರೆ ಯಾವ ದಲಿತ ನಾಯಕನು ಹೊಟ್ಟೆ ಪಾಡಿಗಾಗಿ ಬಂದಿಲ್ಲ ಎಂದರು.
ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಪಕ್ಷದ ಮುಖಂಡರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದ್ದೀರಿ. ದಲಿತ ನಾಯಕರು ಬೆಳೆಯಲು ಬಿಡುತ್ತಿಲ್ಲ. ದಲಿತ ಮತ ಬ್ಯಾಂಕ್ ಬಿಟ್ಟು ಹೋಗುತ್ತಿವೆ ಎಂಬ ಹತ್ತಾಸೆಯಿಂದ ಮಾತನಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ದಲಿತ ವಿರೋಧಿ ಹೇಳಿಕೆ ಖಂಡಿಸಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಗುವದು. ಅವರು ಕ್ಷಮೆ ಕೇಳುವವರೆಗೂ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದರು.
ಜಾಹಿರಾತು….



Hubli News Latest Kannada News