ಸ್ಪರ್ಧಾತ್ಮಕ ಪರೀಕ್ಷೆ ಓದಲು ಬಂದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ, ಇಬ್ಬರನ್ನು ಬಂಧಿಸುವಲ್ಲಿ ಧಾರವಾಡ ಅಬಕಾರಿ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ದೃವ ಅನಿಲ ಮಾದವ್ ಹಾಗೂ ಉಮೇಶ ಶಿವಕುಮಾರ ಮಡಿವಾಳ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಆರೋಪಿಗಳು ನಗರದ ಸಪ್ತಾಪುರ, ಜಯನಗರ ಸೇರಿದಂತೆ ಸುತ್ತಮುತ್ತಲಿನ ನಗರಗಳಲ್ಲಿ ಸ್ಪರ್ಧಾ ಪರೀಕ್ಷೆ ಓದಲು ಬಂದ ವಿದ್ಯಾರ್ಥಿಗಳಿಗೆ ಹಲವು ದಿನಗಳಿಂದ ಗಾಂಜಾ ಮಾರಾಟ ಮಾಡುತ್ತಿದ್ದರಂತೆ. ಕಳೆದ ದಿನ ಜ್ಯೂಪಿಟರ್ ದ್ವಿಚಕ್ಕ ವಾಹನದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುವ ಉದ್ದೇಶದಿಂದ ಓಡಾಟ ನಡೆಸುತ್ತಿದ್ದರು. ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿ, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.
ಬಂಧಿತರಿಂದ 322 ಗ್ರಾಂ. ಗಾಂಜಾ, ಜೊತೆಗೆ ಕೃತ್ಯಕ್ಕೆ ಬಳಸಿದ ಟಿವಿಎಸ್ ಜ್ಯೂಪಿಟರ್ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಒಟ್ಟು ದಾಸ್ತಾನಿನ ಮೊತ್ತ 88,000 ಎಂದು ತಿಳಿದು ಬಂದಿದೆ. ಸದ್ಯ ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಾಹಿರಾತು…