ಹುಬ್ಬಳ್ಳಿ : ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಹುಬ್ಬಳ್ಳಿ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಆಯೋಜಿಸಲಾದ, ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಂಡು ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
ಜಿ.ಪಂ. ಸಿ.ಇ.ಓ ಡಾ.ಬಿ.ಸುಶೀಲ, ಹು-ಧಾ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಯಶವಂತ ಮದೀನಕರ್, ಜಿಲ್ಲಾ ಆಯುಷ್ಯಾಧಿಕಾರಿ ಡಾ.ಮೀನಾಕ್ಷಿ, ತಹಶಿಲ್ದಾರರ ಶಶಿಧರ ಮಾಡ್ಯಾಳ ಭಾಗವಹಸಿದ್ದರು.
ಯೋಗ ಶಿಕ್ಷಕ ಸಂಗಮೇಶ್ ನಿಂಬರಗಿ ಯೋಗಾಸನಗಳ ಕ್ರಮಗಳ ಕುರಿತು ನಿರ್ದೇಶನ ನೀಡಿ, ಅವುಗಳ ಉಪಯೋಗ ತಿಳಿಸಿದರು.