ಹುಬ್ಬಳ್ಳಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಣಾಮಕಾರಿಯಾಗಿ ಕೋವಿಡ್ ನಿರ್ವಹಣೆಯನ್ನು ಮಾಡಲಾಗಿದೆ. ಇದರಿಂದಾಗಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಇದನ್ನು ಮುಂದುವರಿಸಿಕೊಂಡು ಹೋಗುವ ಕೆಲಸವಾಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯ ಮಧುರಾ ಕಾಲೋನಿಯ ಬಾಲವನದಲ್ಲಿ ಎಸ್.ಎಸ್.ಶೆಟ್ಟರ್ ಫೌಂಡೇಷನ್ ವತಿಯಿಂದ ಪೌರ ಕಾರ್ಮಿಕರು ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ನೀಡಲಾದ ಆಹಾರ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.
ಅನ್‌ಲಾನ್ ಮಾಡಲಾಗಿದೆ ಎಂದು ಜನರು ಎಚ್ಚರ ತಪ್ಪಬಾರದು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಪದೇ ಪದೇ ಹ್ಯಾಂಡ್ ಸ್ಯಾನಿಟೈಜ್ ಮಾಡಿಕೊಳ್ಳಬೇಕು. ಹೀಗೆ ಮಾಡುವುದರ ಕೊರೋನಾದಿಂದ ರಕ್ಷಿಸಿಕೊಳ್ಳಬಹದು.
ಇಂದು ಭಾರತೀಯ ಜನ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯನ್ನು ಎಲ್ಲಡೆ ಆಚರಿಸಲಾಗುತ್ತಿದೆ. ಅವರ ತ್ಯಾಗ ಬಲಿದಾನ ಹಿನ್ನಲೆಯನ್ನು ಜನಸಾಮಾನ್ಯರಿಗೆ ತಿಳಿಸಲು ಬಿ.ಜೆ.ಪಿ ವತಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇನ್ಫೋಸಿಸ್ ಸಂಸ್ಥೆಗೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುಬ್ಬಳ್ಳಿ ಜಾಗವನ್ನು ನೀಡಿದ್ದೆ. ಇನ್ಪೋಸಿಸ್ ಸಂಸ್ಥೆ ಕಡೆಯಿಂದಲೂ ಪ್ರಾಮಾಣಿಕಾಗಿ ಸಂಸ್ಥೆ ಸ್ಥಾಪಿಸಿ ಐದು ಸಾವಿರ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಕೆಲಸ ಆರಂಭವಾಗಿತ್ತು. ಹುಬ್ಬಳ್ಳಿಯಲ್ಲಿ ಇನ್ಪೋಸಿಸ್‌ಗೆ ಮೂಲಭೂತ ಸೌಕರ್ಯಗಳ ಕೊರತೆಯಿಲ್ಲ. ಆದರೆ ಇನ್ಫೋಸಿಸ್‌ನೊಂದಿಗೆ ವ್ಯವಹರಿಸುವ ಗ್ರಾಹಕರು ಬೆಂಗಳೂರಿಗೆ ಹೆಚ್ಚಿನ ಆಧ್ಯತೆ ನೀಡುತ್ತಾರೆ. ಇನ್ಪೋಸಿಸ್ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿದ್ದು ಹುಬ್ಬಳ್ಳಿಯಲ್ಲಿ ಕೆಲಸ ಪ್ರಾರಂಭಿಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಇದರಿಂದ ಹುಬ್ಬಳ್ಳಿ ಇತರೆ ಐಟಿ ಕಂಪನಿಗಳು ತಲೆಯತ್ತಲು ಸಹಕಾರಿಯಾಗಲಿದೆ ಎಂದರು.
ಕೋವಿಡ್ ಹಿನ್ನಲೆಯಲ್ಲಿ 6 ತಿಂಗಳ ಕಾಲ ಎಲ್ಲಾ ಸ್ಥಳೀಯ ಹಾಗೂ ಉಪ ಚುನಾವಣೆಗಳನ್ನು ಮುಂದೂಡಲು ಸರ್ಕಾರ ನಿರ್ಣಯ ಕೈಗೊಂಡಿದೆ. ಈ ಕುರಿತು ಚುನಾವಣೆ ಆಯೋಗ ಮನವಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕುರಿತು ಚುನಾವಣಾ ಆಯೋಗ ಸೂಕ್ತ ನಿರ್ಧಾರ ಕೈಗೊಳ್ಳುವುದು. ಕೋವಿಡ್ ವಾಸ್ತವ ಸ್ಥಿತಿಯನ್ನು ಹೈ ಕೋರ್ಟ್‌ಗೆ ಮನವರಿಕೆ ಮಾಡಿಕೊಡಲಾಗುವುದು. ಕೋರ್ಟ್ ಸಹ ಈ ಅಂಶವನ್ನು ಪರಿಗಣಿಸುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ, ಸಂಕಲ್ಪ ಶೆಟ್ಟರ್, ಮೇನಕಾ ಹುರಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.