ಹುಬ್ಬಳ್ಳಿ : ಮುಂಬರುವ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಸರ್ಕಾರ ತಿರ್ಮಾಣ ಮಾಡಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಸರ್ವೇಸಾಮಾನ್ಯವಾಗಿ ಜೂನ್ ನಲ್ಲಿ ಮಾಡಬಹುದು, ಆದರೆ ಈವರೆಗೆ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಜುಲೈನಲ್ಲಿ ಆದರೂ ಅಧಿವೇಶನ ಮಾಡಬೇಕು. ಇನ್ನು ಬೆಳಗಾವಿಯಲ್ಲಿ ಎರಡು ವರ್ಷಗಳ ಹಿಂದೆಯೇ ಅಧಿವೇಶನ ಮಾಡಲಾಗಿದೆ. ಅಲ್ಲದೇ ಬೆಳಗಾವಿಯವರಾದ ಮಾಂತೇಶ ಕವಟಗಿಮಠ ಅವರು ಕೂಡಾ ವಿಶೇಷವಾಗಿ ಅಧಿವೇಶನ ಕರೆಯುವ ವ್ಯವಸ್ಥೆ ಮಾಡಬೇಕೆಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರಣಗಳಿಂದ ಬೆಳಗಾವಿಯಲ್ಲಿ ಮಾಡುವುದು ಸೂಕ್ತ. ಈ ಬಗ್ಗೆ ಸಭಾಧ್ಯಕ್ಷರು ಮತ್ತು ನಾನು ಕೂಡಾ ಒಮ್ಮತ ಸೂಚಿಸಿದ್ದು, ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ಮಾಡುವ ಬಗ್ಗೆ ತಿರ್ಮಾಣ ಮಾಡಬೇಕೆಂದರು.
ಇನ್ನು, ಶಾಲಾ-ಕಾಲೇಜುಗಳ ಶುಲ್ಕ ವಿಚಾರವಾಗಿ ಸರ್ಕಾರ ಎಬಿಸಿಡಿ ಎಂದು ಮಾಡಬೇಕು. ಈ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳು ಕುಂತು ಚರ್ಚೆ ನಡೆಸಿ ಮಾರ್ಗಸೂಚಿಗಳನ್ನು ಹೊರಡಿಸಿ ಸಮಸ್ಯೆ ಬಗೆಹರಿಸಬೇಕೆಂದು ತಿಳಿಸಿದರು.
Hubli News Latest Kannada News