ಹುಬ್ಬಳ್ಳಿ : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವರಾಜ್ ಕುಮಾರ್ ಅಭಿಮಾನಿಗಳಿಂದ ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಈ ಬಾರಿ ಶಿವರಾಜ್ ಕುಮಾರ್ ಅವರ 125 ನೇ ಚಲನಚಿತ್ರ ವೇದ ಹಿನ್ನೆಲೆಯಲ್ಲಿ ಈ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದ್ದು, ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಶಿವರಾಜ ಕುಮಾರ್ ಅಭಿಮಾನಿಗಳಿಂದ ವಿತರಣೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಬಿ ಜೆ ಪಿ ರಾಜ್ಯ ಪ್ರದಾನಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ , ಶಿವಾನಂದ ಮುತ್ತಣ್ಣವರ, ಶಶಿ ಬಿಜ್ವಾಡ್, ಪ್ರಕಾಶ್ ಬೆಂಡಿಗೇರಿ ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.