ಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಈ ಸಂಬಂಧ ಯೋಗೀಶ್ ಗೌಡ ಪತ್ನಿ ಮಲಮ್ಮ ಹಾಗೂ ಜಿ.ಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಮತ್ತು ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಅವರಿಗೆ ಸಿಬಿಐ ವಿಚಾರಣೆಗೆ ಬರುವಂತೆ ಸೂಚನೆ ನೀಡಿತ್ತು.
ಸಿಬಿಐ ತನಿಖೆಗೆ ಹಾಜರಾದಕರಿಗಾರ, ನಾಗರಾಜ ಗೌರಿ, ಮಲ್ಲಮ್ಮ, ಬಸವರಾಜ ಮುತ್ತಗಿಈ ಹಿನ್ನೆಲೆಯಲ್ಲಿ ಉಪನಗರ ಪೊಲೀಸ್ ಠಾಣೆಗೆ ಜಿ.ಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಕರಿಗಾರ ಹಾಗೂ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ವಿಚಾರಣೆಗಾಗಿ ಆಗಮಿಸಿದ್ದಾರೆ. ಈಗಾಗಲೇ ಹಲವು ಬಾರಿ ಕರಿಗಾರ ಮತ್ತು ನಾಗರಾಜ ಗೌರಿ ಸಿಬಿಐ ವಿಚಾರಣೆ ಎದುರಿಸಿದ್ದಾರೆ.ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಬಂಧನ ಹಿನ್ನೆಲೆಯಲ್ಲಿ ಮಲಮ್ಮ ಹಾಗೂ ಕರಿಗಾರ ಹಾಗೂ ನಾಗರಾಜ ಗೌರಿ ಅವರನ್ನು ಸಿಬಿಐ ಮತ್ತೆ ವಿಚಾರಣೆಗೆ ಕಡೆದಿರುವುದು ಕುತೂಹಲ ಕೆರಳಿಸಿದೆ.
Hubli News Latest Kannada News