ಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು.
ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು ಸಮಾಧಿಗೆ ಭೇಟಿ ನೀಡಿದ ಬಸವರಾಜ ಬೊಮ್ಮಾಯಿ ಭಾವುಕರಾಗಿ ತಂದೆ ತಾಯಿಗೆ ನಮಸ್ಕಾರ ಮಾಡಿದರು.
Hubli News Latest Kannada News