ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೈ ನಾಯಕರ ನೇತೃತ್ವದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಅವರು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಾವುಟವನ್ನು ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಲಾಯಿತು.
ಮಧು ಬಂಗಾರಪ್ಪ ಜೊತೆ ಹಲವು ಜೆಡಿಎಸ್ ನ ಮುಖಂಡರು ಕೈ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೆ ಮಧು ಬಂಗಾರಪ್ಪ ಸೇರ್ಪಡೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ, ಸತೀಶ್ ಜಾರಕಿಹೊಳಿ, ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.