ಹುಬ್ಬಳ್ಳಿ : ನೂತನ ಸಚಿವರಾಗಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಿ.ಸಿ.ಪಾಟೀಲ ಅವರಿಗೆ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಪಂಚಮಸಾಲಿ ಸಮುದಾಯದ ಮುಖಂಡರಾದ ಸಿ.ಸಿ.ಪಾಟೀಲ ಅವರು ಸಚಿವರಾಗಿರುವುದು ನಿಜಕ್ಕೂ ಖುಷಿ ತಂದಿದೆ. ಅಲ್ಲದೇ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದ್ದರು.