ಹುಬ್ಬಳ್ಳಿ : ಹುಬ್ಬಳ್ಳಿ ನೆಹರು ಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ನಗರ ತಹಶಿಲ್ದಾರ ಹಾಗೂ ತಾಲೂಕು ದಂಡಾಧಿಕಾರಿ ಶಶಿಧರ ಮಾಡ್ಯಾಳ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್ ,ಶಾಸಕರಾದ ಅಬ್ಬಯ್ಯ ಪ್ರಸಾದ್, ಪ್ರದೀಪ್ ಶೆಟ್ಟರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.