ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧ ನಾಮಪತ್ರ ಸಲ್ಲಿಕೆಯ ಮೂರನೇಯ ದಿನವಾದ ಇಂದು (ಆಗಸ್ಟ್ 18) ಒಂದು ನಾಮಪತ್ರ ಸಲ್ಲಿಕೆ ಆಗಿದೆ.
ಮಹಾನಗರ ಪಾಲಿಕೆಯ 75 ನೇಯ ವಾರ್ಡ್‌ಗೆ ಸ್ವತಂತ್ರ ಅಭ್ಯರ್ಥಿಯಾಗಿ ಬೀಬಿ ಆಯಿಷಾ ಮಕ್ತುಮ ಹುಸೇನ ಯರಗಟ್ಟಿ ಅವರು ಇಂದು ಮಹಾನಗರಪಾಲಿಕೆ ನೌಕರ ಪತ್ತಿನ ಸಂಘದ ಕಚೇರಿಯಲ್ಲಿ ಸ್ಥಾಪಿಸಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Hubli News Latest Kannada News