ಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಧಾರುಣವಾಗಿ ಸಾವಿಗೀಡಾದ ಘಟನೆ ಉಣಕಲ್ ಕೆರೆ ಬಳಿ ಪ್ರೆಸಿಡೆಂಟ್ ಹೊಟೆಲ್ ಎದುರು ನಡೆದಿದೆ.
ಯುವಕರು ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿದೆ. ಹೀಗಾಗಿ ರಸ್ತೆಯ ಪಕ್ಕದ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರವಾದ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಮೃತ ಯುವಕರ ಗುರುತು ಪತ್ತೆಯಾಗಿಲ್ಲ.
ಘಟನೆ ನಡೆಯುತ್ತಿದ್ದ ಹಾಗೇ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ, ಯುವಕರನ್ನ ಕಿಮ್ಸಗೆ ರವಾನೆ ಮಾಡಲಾಗಿತ್ತಾದರೂ, ಯಾವುದೇ ಪ್ರಯೋಜನವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.