ರಾಜ್ಯದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಕುರಿತಂತೆ ಸೆಪ್ಟೆಂಬರ್ 5 ರಂದು ಸಭೆ ನಡೆಸಲಾಗುವುದು. ಸಭೆಯಲ್ಲಿ ಪ್ರಸ್ತುತ ಕೊರೊನಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಿ, ತಜ್ಞರ ಸಲಹೆ ಪಡೆದುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.
ಹುಬ್ಬಳ್ಳಿ ವಿಮಾ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅವಕಾಶ ನೀಡಲು ಹಲವು ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಹಾಗಾಗಿ ರಾಜ್ಯದಲ್ಲಿನ ಜಿಲ್ಲೆಗಳಲ್ಲಿ ಇರುವ ಕೊರೊನಾ ಕುರಿತು ತಜ್ಞರಿಂದ ವರದಿ ಕೇಳಿದ್ದೇವೆ. ತಜ್ಞರ ವರದಿ, ಸಲಹೆಗಳನ್ನು ಪಡೆದುಕೊಂಡ ಗಣೇಶ ಉತ್ಸವ ಕುರಿತು ಸೆಪ್ಟೆಂಬರ್ 5 ರಂದು ನಿರ್ಧಾರ ಮಾಡಲಾಗುವುದು ಎಂದರು.
*ದೇಶ ವಿರೋಧಿ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್‌ರು ನಿಗಾ ಇಟ್ಟಿದ್ದಾರೆ.*
ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ ನಿಗಾ ಇಟ್ಟಿದ್ದಾರೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ ನಿಗಾ ವಹಿಸಲಾಗುತ್ತಿದೆ.
ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ. ಎನ್‌ಐಎ ಜೊತೆ ನಮ್ಮ ಪೊಲೀಸರು ಕೂಡಿಕೊಂಡ ಕೆಲಸ ಮಾಡುತ್ತಿದ್ದಾರೆ ಎಂದರು.
*3 ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ.*
ಇನ್ನೂ ಪಾಲಿಕೆ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮೂರು ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಅದರಲ್ಲಿ ಮೂರು ಪಾಲಿಕೆಯಲ್ಲೂ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ. ಹುಬ್ಬಳ್ಳಿ ಧಾರವಾಡ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುತ್ತಿದೆ. ಹಾಗಾಗಿ ಅವಳಿನಗರ ಮತದಾರರು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವಂತೆ ಸಿಎಂ ಮನವಿ ಮಾಡಿದರು.
*ಆರ್ಥಿಕ ಚಟುವಟಿಕೆ ಮೇಲೆ ನಿರ್ಬಂಧ ಹಾಕುವ ಉದ್ದೇಶ ಸರ್ಕಾರಕ್ಕಿಲ್ಲ.*
ಈಗಾಗಲೇ ನಾವು ವೀಕೆಂಡ್ ಕರ್ಪ್ಯೂ ತೆಗೆದಿದ್ದೇವೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡ ನೈಟ್ ಕರ್ಪ್ಯೂ ತೆಗೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಆರ್ಥಿಕ ಚಟುವಟಿಕೆ ಮೇಲೆ ನಿರ್ಬಂಧ ಹಾಕುವ ಉದ್ದೇಶ ನಮ್ಮ ಸರ್ಕಾರಕ್ಕಿಲ್ಲ. ಕೊವಿಡ್ ನಿರ್ವಹಣೆಯೂ ನಮಗೆ ಅಷ್ಟೇ ಮುಖ್ಯ. ಕೊವಿಡ್ ನಿಯಂತ್ರಣದಲ್ಲಿರುವ ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ಸಡಿಲಿಕೆ ಬಗ್ಗೆ ಮುಂದಿನ ದಿನದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು..
ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಹಲವಾರು ಕೇಂದ್ರ ಸಚಿವರು ಹುಬ್ಬಳ್ಳಿ ಆಗಮಿಸುತ್ತಿದ್ದಾರೆ. ಬಳಿಕ ದಾವಣಗೆರೆ ಶಾ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಜೊತೆ ರಾಜ್ಯದ ಹಲವಾರು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಮಾಹಿತಿ ನೀಡಿದರು.