ಹುಬ್ಬಳ್ಳಿ : ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾದ ಲಾಬೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹದೇವ ಬಿ ಚೆಟ್ಟಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾಡಳಿತದಿಂದ ಗೌರವ ರಕ್ಷೆ ನೀಡಲಾಯಿತು.