ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ ಹೊಂದಿದ್ದೇವು. ಆದ್ರೆ ಇತ್ತೀಚಿನ ಚುನಾವಣಾ ಕಾರ್ಯವೈಖರಿಯಿಂದ ಬೆಸತ್ತು ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದರು.
ನಮ್ಮ ಪಕ್ಷದ ಅಭ್ಯರ್ಥಿ 25 ನೇ ವಾರ್ಡ್ ನ ಲಕ್ಷ್ಮಿ ಹಿಂಡಸಗೇರಿ ಗೆಲುವು ಸಾಧಿಸಿದ್ದಾರೆ. ಇನ್ನು ಎರಡನೇ ಮೂರನೇ ಸ್ಥಾನದಲ್ಲಿ ಮೂವರು ಅಭ್ಯರ್ಥಿಗಳು ಬಂದು, ಕೆಲವೇ ಮತಗಳಿಂದ ಸೋಲುಕಂಡಿದ್ದಾರೆ ಎಂದರು.
ಹುಬ್ಬಳ್ಳಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವದಕ್ಕೆ ನಮ್ಮ ಯಾವುದೇ ಪಾತ್ರವಿಲ್ಲ. ಆದ್ರೆ ಕಲಬುರಗಿ ಪಾಲಿಕೆಯಲ್ಲಿ ನಮ್ಮ ಪಕ್ಷ ನಿರ್ಣಾಯಕವಾಗಿತ್ತು. ನಮ್ಮ ನಾಯಕರಾದ ಕುಮಾರಸ್ವಾಮಿ ಸೂಕ್ತ ನಿರ್ಧಾರ ತಗೆದುಕೊಳ್ಳಲಿದ್ದಾರೆ ಎಂದರು.
Hubli News Latest Kannada News