ಹುಬ್ಬಳ್ಳಿ : ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಎಎನ್ಎಂಐ ಸಿಬ್ಬಂದಿ
ನಂದಿನಿ ಚುಂಚ ಎಂಬುವವರ ಮೇಲೆ ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಹಲ್ಲೆ ಮಾಡಿದ್ದಾಳೆ. ಜಿಲ್ಲಾಡಳಿತ 85,000 ವ್ಯಾಕ್ಸಿನ್ ಗುರಿಯನ್ನು ಹೊಂದಿದ್ದು, 416 ತಂಡಗಳನ್ನು ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದೇ ಆದರೆ ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಜೀವಕ್ಕೆ ಮಾತ್ರ ಯಾವುದೇ ಬೆಲೆ ಇಲ್ಲದಂತಾಗಿದೆ. ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದ್ದು, ಮಹಿಳೆಯೊಬ್ಬಳು ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದು, ಸಿಬ್ಬಂದಿ ಗಾಯಗೊಂಡಿದ್ದಾರೆ.