ಹುಬ್ಬಳ್ಳಿ : ಹಿಜಾಬ್ ಕುರಿತು ಇಂದು ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ ನಿಯೋಜನೆ ಮಾಡಲಾಗಿದೆ.
ಹಾಗೂ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿರುವ ಬೆನ್ನಲ್ಲೇ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಚನ್ನಮ್ಮ ವೃತ್ತದಲ್ಲಿ ಕೆ ಎಸ್ ಆರ್ ಪಿ ತುಕಡಿ ಸೇರಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ. ನಗರದ ವಿವಿಧೆಡೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ಧಾರವಾಡ ಜಿಲ್ಲಾಡಳಿತ ಜರುಗಿಸಿದ್ದು, ಗುಂಪು ಸೇರದಂತೆ, ಮಾರಕಾಸ್ತ್ರ ಒಯ್ಯದಂತೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ವಿಜಯೋತ್ಸವ, ಮೆರವಣಿಗೆ ಇತ್ಯಾದಿಗಳ ಮೇಲೆಯೂ ನಿರ್ಬಂಧ ಹಾಕಲಾಗಿದೆ.