ಹುಬ್ಬಳ್ಳಿ : ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿ ಹಾಗೂ ಪೋಷಕರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೌದು, ಕೇಶ್ವಾಪುರದ ಸೆಂಟ್ ಮೈಕಲ್ ಸ್ಕೂಲ್ ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಇಂದು ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ತೆರಳಿದರು. ಈ ವೇಳೆ ಶಾಲೆಯ ಆವರಣದಲ್ಲಿ ಹೆಜ್ಜೇನು ಗೂಡು ಕಟ್ಟಿತ್ತು. ಅದಕ್ಕೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು ಪರಿಣಾಮ ಸ್ಥಳದಲ್ಲಿದ್ದ ವಿದ್ಯಾರ್ಥಿಗಳು, ಪೋಷಕರು ಹಾಗೂ ಪೋಲಿಸರ ಮೇಲೆ ದಾಳಿ ಮಾಡಿವೆ. ಪರಿಣಾಮ ಪರೀಕ್ಷಾ ಕೇಂದ್ರದಲ್ಲಿದ್ದವರು ಕಾಲ್ಕಿತ್ತಿದ್ದಾರೆ. ಆದರೂ ವಿದ್ಯಾರ್ಥಿ ಇಮಾಮ್, ಪೋಷಕರಾದ ರಾಜೇಶ್ವರಿ.ಕೆ ಹಾಗೂ ಪೊಲೀಸ್ ಸಿಬ್ಬಂದಿ ವಿದ್ಯಾ ದ್ಯಾಮನೂರು ಎಂಬುವರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Hubli News Latest Kannada News