ಹುಬ್ಬಳ್ಳಿ : ಕನ್ನಡ ಚಿತ್ರನಟ ಸುದೀಪ್ ಹೇಳಿರುವ ಮಾತು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ. ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಅದನ್ನೇ ಸುದೀಪ್ ಹೇಳಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ನಟ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ..
ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ರಾಷ್ಟ್ರೀಯ ಭಾಷೆ ಎಂಬ ನಟ ಅಜೇಯ್ ದೇವಗನ್ ಹೇಳಿಕೆ ವಿಚಾರವಾಗಿ ಸುದೀಪ್ ಸರಿಯಾಗಿಯೇ ಹೇಳಿದ್ದಾರೆ ಎಂದರು.
ದೆಹಲಿ ಪ್ರವಾಸದ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, 30ನೇ ತಾರೀಖಿನಂದು ಚೀಫ್ ಜಸ್ಟಿಸ್- ಚೀಫ್ ಮಿನಿಸ್ಟರ್ ಸಮ್ಮೇಳನ ಇದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಗಳು ಇರ್ತಾರೆ.
ನ್ಯಾಯಾಂಗದ ಬಗ್ಗೆ ಹಲವಾರು ವಿಚಾರಗಳು ಚರ್ಚೆಯಾಗಲಿದೆ. ಈ ಹಿನ್ನಲೆಯಲ್ಲಿ ನಾನು ದೆಹಲಿ ತೆರಳುತ್ತಿದ್ದೇನೆ ಎಂದು ಅವರು ಹೇಳಿದರು.
ಕೊವಿಡ್ ನಾಲ್ಕನೇ ಅಲೆ ಕುರಿತು ಮಾತನಾಡಿದ ಅವರು, ಕೋವಿಡ್ ನಾಲ್ಕನೇ ಅಲೆ ಇನ್ನೂ ಬಂದಿಲ್ಲ. ಯೂರೋಪ್ ರಾಷ್ಟ್ರಗಳಲ್ಲಿ ಸೋಂಕು ಹೆಚ್ಚಳವಾಗಿದೆ
ನಮ್ಮಲ್ಲಿ ಲಿಸಿಕಾ ಅಭಿಯಾನ ಸರಿಯಾಗಿ ನಡೆದಿದೆ.
ಈಗಾಗಲೇ ಎರಡು ಡೋಸ್ ತೆಗೆದುಕೊಂಡವರಿಗೆ ಬೂಸ್ಟರ್ ಡೋಸ್ ಕೊಡಲು ತಿರ್ಮಾನಿಸಲಾಗಿದೆ.
6-12 ವರ್ಷದೊಳಗಿನವರಿಗೆ ವ್ಯಾಕ್ಸಿನ್ ನೀಡಲು ತಿರ್ಮಾನ ತೆಗೆದುಕೊಳ್ಳಲಾಗಿದೆ. ಜಿನೋಮ್ ಟೆಸ್ಟ್ ಮಾಡಲು ತಿರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.