ಹುಬ್ಬಳ್ಳಿ : ನಗರದ ಮಹಾನಗರ ಪಾಲಿಕೆ ಕಚೇರಿಯ ಮೇಲೆ ಹಾಗೂ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ ಪರಿಣಾಮ ಕಚೇರಿ ಕಿಡಕಿಯ ಗಾಜು ಹಾಗೂ ವಾಹನಗಳು ಜಖಂಗೊಂಡ ಘಟನೆ ನಡೆದಿದೆ.
ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿ ಮೊಹ್ಮದ್ ಎಂಬಾತ ಇಂದು ಬೆಳಿಗ್ಗೆ ಮಹಾನಗರ ಪಾಲಿಕೆ ಕಚೇರಿಗೆ ಬಂದವನೇ,ಕಲ್ಲುಗಳಿಂದ ಕಚೇರಿ ಕಿಡಕಿ ಹಾಗೂ ಎರಡು ಕಾರುಗಳು ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ.
ಕೂಡಲೇ ಅಲ್ಲೇ ಇದ್ದ ಸೆಕ್ಯೂರಿಟಿ ಸಿಬ್ಬಂದಿ ಉಪನಗರ ಪೊಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಿದ್ದು ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆಯ ಪೊಲೀಸರು ಆರೋಪಿ ಮೊಹ್ಮದ್ ನನ್ನು ಠಾಣೆಗೆ ಕರೆದುಕೊಂಡು ಹೋಗಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Hubli News Latest Kannada News