Home / Top News / ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ : ಪ್ರಮೋದ್ ಮುತಾಲಿಕ್

ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ : ಪ್ರಮೋದ್ ಮುತಾಲಿಕ್

Spread the love

ಹುಬ್ಬಳ್ಳಿ: ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್​ಸ್ಪೀಕರ್ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಡೆಡ್ ಲೈನ್ ಕೊನೆಯಾಗಿದ್ದು, ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ ನಿರ್ಬಂಧ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಪ್ರಕಟಿಸಿ. ಮೈಕ್ ಬಳಸಲು ಧಾರ್ಮಿಕ ಕೇಂದ್ರಗಳು ಅನುಮತಿ ಪಡೆಯಬೇಕು. ರಾತ್ರಿ 10 ಗಂಟೆ ಬಳಿಕ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮ ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ ಹದಿನೈದು ದಿನಗಳ ಗಡವು ನೀಡಿತ್ತು. ಆದರೆ ಈವರೆಗೆ ಯಾವುದೇ ನಿಯಮಗಳು ಜಾರಿಯಾಗಿಲ್ಲ. ಸರ್ಕಾರದ ಸುತ್ತೋಲೆ ಕಸದ ಬುಟ್ಟಿಗೆ ಸೇರಿವೆ ಹೀಗಾಗಿ ಶ್ರೀರಾಮ ಸೇನೆ ಸೇರಿದಂತೆ ಹತ್ತಕ್ಕಿಂತ ಹೆಚ್ಚು ಹಿಂದೂಪರ ಸಂಘಟನೆಗಳ ಸಹಯೋಗದಲ್ಲಿ ಮೈಕ್ ತೆರವಿನ ಹೋರಾಟ ಮುಂದುವರಿಸಲಾಗುತ್ತಿದೆ ಎಂದು ಮುತಾಲಿಕ್ ತಿಳಿಸಿದರು.

ಬಿಜೆಪಿ ಜಯಗಳಿಸಿದ್ದೆ ಹಿಂದೂಗಳಿಂದ ಆದರೆ ಹಿಂದೂಗಳು ನಿರಂತರವಾಗಿ ಹೋರಾಟ ಮಾಡುತ್ತಾ ಬರಲಾಗುತ್ತಿದ್ದರು ಯಾಕೆ ಕಿವಿ ಮುಚ್ಚಿಕುಳಿತುಕೊಂಡಿದ್ದಾರೆ. ಸರ್ಕಾರ ಜೂನ್ 8 ರೊಳಗೆ ಈಗಾಗಲೇ ಹೊರಡಿಸಿದ ಸುತ್ತೋಲೆಯನ್ನು ಜಾರಿಗೊಳಿಸಬೇಕು. ಇಲ್ಲದೇ ಹೋದರೆ ಹೋರಾಟ ಅನಿವಾರ್ಯ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಕಾಶ್ಮೀರದಲ್ಲಿ ಹಿಂದೂಗಳ ಮಾರಣಹೋಮ: ಕಾಶ್ಮೀರದಲ್ಲಿ 375 ನೇ ವಿಧಿ ರದ್ದು ಮಾಡಿ ಕೇಂದ್ರ ಸರ್ಕಾರ ಆಡಳಿತ ಮಾಡುತ್ತಿದ್ದರು ಸಹಿತ ಅಲ್ಲಿ ಹಿಂದೂಗಳ‌ ಮಾರಣ ಹೋಮವಾಗುತ್ತಿವೆ. ಕಳೆದ ತಿಂಗಳಲ್ಲಿ 7 ಜನರ ಕೊಲೆಯಾಗಿದೆ. ಹಿಂದೂಗಳ ಕೊಲೆಯಾಗುತ್ತಿರುವುದು ನೋವಿನ ಸಂಗತಿ. ಹಿಂದೂಗಳಿಗೆ ಸರ್ಕಾರ ರಕ್ಷಣೆ ನೀಡಬೇಕು. ಇಲ್ಲದೇ ಹೋದಲ್ಲಿ ನಾವೇ ಕಾಶ್ಮೀರ ಚಲೋ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]