ಹುಬ್ಬಳ್ಳಿ : ವಿಧಾನ ಪರಿಷತ್ ನಾಲ್ಕು ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೇ, ಅದರಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರ ನಡೆಯುತ್ತಿದೆ. ಇಂದು ನಾನು ಕೂಡಾ ಬೆಳಗಾವಿ, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆ. ಇದುವರೆಗೆ ನಡೆದ ಚುನಾವಣೆ ಪ್ರಚಾರ ನೋಡಿದರೆ ನಮ್ಮ ಅಭ್ಯರ್ಥಿಗಳ ಗೆಲುವು ಸಾಧಿಸಲಿದ್ದಾರೆ ಎಂದರು.
ದೆಹಲಿ ಮತ್ತು ಯುಪಿಯಲ್ಲಿ ನಡೆಯುತ್ತಿರುವ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳನ್ನು ಕರೆದು ಸಭೆ ಮಾಡಿದ್ದೇನೆ. ಇದೀಗ ರಾಜ್ಯದಲ್ಲಿ ಪರಿಸ್ಥಿತಿ ಶಾಂತವಿದೆ. ಆದರೂ ಜಾಗೃತರಾಗಿರಬೇಕೆಂದು ಸೂಚನೆ ನೀಡಿದ್ದೇವೆ. ಪ್ರತಿಯೊಂದು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಸಿಪಿಐಯನ್ನು ಉಸ್ತುವಾರಿ ಮಾಡಲಾಗಿದೆ. ಅವರು ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲು ತಿಳಿಸಲಾಗಿದೆ. ಎಲ್ಲ ಸಮೂದಾಯದ ನಾಯಕರು ಸೌಹಾರ್ದತೆ ಕಾಪಾಡಬೇಕೆಂದು ತಿಳಿಸಲಾಗಿದೆ ಎಂದರು.
ರಾಜ್ಯದಲ್ಲಿ ಆ್ಯಸಿಡ್ ದಾಳಿಗಳು ಹೆಚ್ಚಾಗುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಿದ್ದೇವೆ. ಬರುವ ದಿನಗಳಲ್ಲಿ ಇಂತಹ ಘಟನೆಗಳು ನಡೆಯದ ಹಾಗೇ ನೋಡಿಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
Hubli News Latest Kannada News