ಹುಬ್ಬಳ್ಳಿ: ನಿನ್ನೆ ದಿನದಂದು ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಪಡಿಸಿಕೊಂಡರು.
ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ, ಇಎಸ್ಐ ಆಸ್ಪತ್ರೆಯಿಂದ ಪ್ರತಿಭಟನೆ ರ‌್ಯಾಲಿಯನ್ನು ಹಮ್ಮಿಕೊಂಡು, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ತಡೆದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಪಡಿಸಿಕೊಂಡರು.
ಇನ್ನೂ ಈ ಸಂದರ್ಭದಲ್ಲಿ ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್ ಘೋಷಣೆ ಕೂಗಿದರು.
ಕಾಂಗ್ರೆಸ್ ಪಕ್ಷಕ್ಕೆ ದಿಕ್ಕಾರ, ಸಿದ್ದರಾಮಯ್ಯ ಅವರಿಗೆ ದಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.