ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (40) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು.
ಬೆಳಿಗ್ಗೆ ಜಿಮ್‌ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ.
ವಿವಿಧ ಪತ್ರಿಕೆ, ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು, ಬಸವರಾಜ ಬೊಮ್ಮಾಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
Hubli News Latest Kannada News