ಧಾರವಾಡ : ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಬಳಿ ನಡೆದಿದೆ.
ಬೆಳಗಾವಿ ಕಡೆಯಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅವಘಡ ನಡೆದಿದೆ .
ಘಟನೆಯಲ್ಲಿ ಲಾರಿಯಲ್ಲಿದ್ದ ಕ್ಲೀನರ್ ಹಾಗೂ ಖಾಸಗಿ ಬಸ್‌ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ .
ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.