ಹುಬ್ಬಳ್ಳಿ: ಏಕಾಏಕಿಯಾಗಿ ತುಂಬಿ ಬಂದ ಬೆಣ್ಣೆ ಹಳ್ಳದ ಮಧ್ಯದಲ್ಲಿ ಸಿಲುಕಿಕೊಂಡ 25 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ತಾಲೂಕಿನ ಇಂಗಳಹಳ್ಳಿ ಗ್ರಾಮದ ಸುತ್ತಮುತ್ತ ಅತೀ ಹೆಚ್ಚು ಮಳಯಾದ ಪರಿಣಾಮ ಬೆಣ್ಣೆ ಹಳ್ಳ ತುಂಬಿ ಬಂದಿದೆ. ಕೃಷಿ ಕೆಲಸಕ್ಕೆ ತೆರಳಿದ್ದ 25 ಕ್ಕೂ ಹೆಚ್ಚು ಜನ ಸಿಲುಕಿಕೊಂಡಿದ್ದರು.ವಿಷಯ ತಿಳಿಯುತ್ತಿದಂತೆ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಗೋಕಾಕ್ ಮತ್ತು ತಹಶೀಲ್ದಾರ ಪ್ರಕಾಶ ನಾಶಿ ಸ್ಥಳಕ್ಕೆ ದೌಡಾಯಿಸಿ 25 ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಿದ್ದಾರೆ.
ಇನ್ನೂ ನೀರಿನಲ್ಲಿ ಕೊಚ್ಚಿಕೊಂಡು ಓರ್ವ ವ್ಯಕ್ತಿ ಕೊಚ್ಚಿ ಹೋಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.