ಹುಬ್ಬಳ್ಳಿ : ಟಾಟಾ ಏಸ್ ಹಾಗೂ ಕಾರ್ ನಡುವೆ ಡಿಕ್ಕಿಯಾದ ಪರಿಣಾಮ 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ನಡೆದಿದೆ .
ತಾಲೂಕಿನ ನೂಲ್ವಿ ಕ್ರಾಸ್ ಬಳಿ ಕಾರ್ಖಾನೆಯಿಂದ ಕೆಲಸ ಮುಗಿಸಿ ವಾಪಸ್ ಮನೆಗೆ ಹೋಗುವಾಗ ಸ್ಪೀಡ್ ಆಗಿ ಬಂದ ಕಾರ ಟಾಟಾಸ್ ಗೆ ಡಿಕ್ಕಿ ಹೊಡೆದಿದೆ.ಇನ್ನೂ ಟಾಟಾಎಸ್ ನಲ್ಲಿದ್ದ ಹದಿನೈದುಕ್ಕೂ ಜನರಿಗೆ ಗಾಯಗೊಂಡಿದ್ದಾರೆ.ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಇನ್ನೂ ಸ್ಥಳಕ್ಕೆ ಆಗಮಿಸಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ