ಸಿಲಿಂಡರ್ ಸ್ಟೋಟಗೊಂಡು ಮನೆಯೊಂದು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಬೂಸಾಬ್ ಅಲ್ಲಿಸಾಬ ಸಂಶಿ ಎಂಬವರರ ಮನೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಪೋಟವಾಗುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ.ಆದ್ರೆ ಮನೆಯಲ್ಲಿದ್ದ ದಿನಬಳಕೆ ವಸ್ತುಗಳು,ಬೆಂಕಿಗಾಹುತಿಯಾಗಿವೆ.
ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.