ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರು , ಆಕೆಯ ಗುಪ್ತಾಂಗ , ಸ್ತನ ಮತ್ತು ನಾಲಗೆಯನ್ನು ಕತ್ತರಿಸಿದ ಪೈಶಾಚಿಕ ಘಟನೆ ಬಿಹಾರದ ಸಮಷ್ಠಿಪುರ ಜಿಲ್ಲೆಯ ಕಲ್ಯಾಣಪುರ ಎಂಬಲ್ಲಿ ನಡೆದಿದೆ . ನವೆಂಬರ್ 11 ರಂದು ಮನೆಗೆ ನುಗ್ಗಿ ಬಾಲಕಿಯನ್ನು ಹೊತ್ತೊಯ್ದ ಕಾಮುಕರು , ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ , ಸ್ತನ , ಗುಪ್ತಾಂಗ , ನಾಲಗೆ ಕತ್ತರಿಸಿದ್ದಾರೆ . ಕುಟುಂಬಸ್ಥರು ಬಾಲಕಿಗಾಗಿ ಹುಡುಕಾಡಿದಾಗ ಮನೆ ಸಮೀಪದ ತೋಟದಲ್ಲಿ ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ . ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು , ಪ್ರಸ್ತುತ ಸಾವು – ಬದುಕಿನ ನಡುವೆ ಹೋರಾಡುತ್ತಿದ್ದಾಳೆ . ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು , ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ .
