ಬಾಲಿವುಡ್ ನಟಿ ಸನ್ನಿ ಲಿಯೋನ್ ಕೇರಳ ಪೊಲೀಸರ ಅಪರಾಧ ವಿಭಾಗವು ವಂಚನೆ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕೋಝಿಕ್ಕೋಡ್‌ನಲ್ಲಿ ವೇದಿಕೆಯ ಪ್ರದರ್ಶನಕ್ಕಾಗಿ ಸಂಸ್ಥೆಯೊಂದಕ್ಕೆ ಮಾಡಿಕೊಂಡಿರುವ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಪ್ರಕರಣದಲ್ಲಿ ತನ್ನ ಪತಿ ಮತ್ತು ಉದ್ಯೋಗಿಯ ವಿರುದ್ಧದ ಆರೋಪಗಳನ್ನು ಕೂಡ ಸನ್ನಿಲಿಯೋನ್ ತಿರಸ್ಕರಿಸಿದ್ದಾರೆ
ನಾವು ಯಾವುದೇ ತಪ್ಪು ಮಾಡಿಲ್ಲ . ತಪ್ಪು ಮಾಡಿರುವುದಕ್ಕೆ ಸಾಕ್ಷಿ ದೊರೆತಿಲ್ಲ . ನಾವು ನಷ್ಟ ಅನುಭವಿಸಿದ್ದೇವೆ ಎಂದು ಸನ್ನಿಲಿಯೋನ್ ಹೇಳಿದ್ದಾರೆ .