ಹುಬ್ಬಳ್ಳಿ : ನಗರದ ಬಾಲಾಜಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯೊಬ್ಬರ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿದ್ಯಾನಗರ ಠಾಣೆ ಪೊಲೀಸರು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಾರ್ಡ್ ಬಾಯ್ ಅಶೋಕ ಹಲಗಿಯನ್ನು ಬಂಧಿಸಿದ್ದಾರೆ.
ಅಣ್ಣಿಗೇರಿಯ ಅಶೋಕ ಘಟನೆ ಬಳಿಕ ತಲೆ ಮರೆಸಿಕೊಂಡಿದ್ದ. ಬಳಿಕ, ಅಪಘಾತಕ್ಕೊಳಗಾಗಿ ಗಾಯಗೊಂಡಿದ್ದ ಆತನನ್ನು ಬಂಧಿಸಲಾಗಿದೆ. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲಿಸರು ತಿಳಿಸಿದ್ದಾರೆ.
ಪಾರ್ಶ್ವವಾಯು ಮತ್ತು ಶ್ವಾಸಕೋಶದ ಸೋಂಕಿನಿಂದಾಗಿ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ಸಿಟಿ ಸ್ಕ್ಯಾನ್ ಮಾಡುವುದಕ್ಕಾಗಿ ಅವರನ್ನು ಕೊಠಡಿಗೆ ಕರೆದೊಯ್ದಿದ್ದ ಆರೋಪಿ, ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಮೇ 23ರಂದು ಪ್ರಕರಣ ದಾಖಲಾಗಿತ್ತು.