ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ 14 ದಿನದಲ್ಲಿ 66 ಬೆಡ್‌ಗಳ ಕೋವಿಡ್ ಆಸ್ಪತ್ರೆ ನಿರ್ಮಿಸಲಾಗಿದೆ. ಮೇಕ್ ಶಿಫ್ಟ್ ಮಾದರಿಯಲ್ಲಿ ನಿರ್ಮಿಸಲಾಗಿರುವ ಆಸ್ಪತ್ರೆಯನ್ನು ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹಾಗೂ ಬೃಹತ್ ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಉದ್ಘಾಟಿಸಿದರು.
ರಾಜ್ಯ ವಿಪತ್ತು ನಿರ್ವಹಣಾ ನಿಧಿಯ
66 ಲಕ್ಷ ವೆಚ್ಚದಲ್ಲಿ ಒಟ್ಟು 1500 ಚದುರ ಮೀಟರ್ ವಿಸ್ತೀರ್ಣದ ಮೂರು ಕ್ಯಾಜುಯಾಲಿಟಿ ಕೇಂದ್ರಗಳನ್ನು ನಿರ್ಮಿಸಲಾಗಿದ್ದು, ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ಕಲ್ಪಿಸಲಾಗಿದೆ. ಪ್ರತಿ ಕೇಂದ್ರ 22 ಹಾಸಿಗೆಗಳ ಸಾಮಾರ್ಥ್ಯ ಹೊಂದಿದೆ. ಕ್ಯಾಜ್ಯಯಾಲಿಟಿ ಕೇಂದ್ರ ಮಧ್ಯದಲ್ಲಿ ವೈದ್ಯರು ಹಾಗೂ ನರ್ಸ್‌ಗಳು ಕಾರ್ಯ ನಿರ್ವಹಿಸಲು ಪ್ರತ್ಯೇಕ ಸ್ಥಳಾವಕಾಶವಿದೆ. 250 ಚದುರ ಮೀಟರ್ ವಿಸ್ತೀರ್ಣದಲ್ಲಿ
ಮಹಿಳೆಯರು ಹಾಗೂ ಪುರುಷರಿಗಾಗಿ ಪ್ರತ್ಯೇಕವಾಗಿ 6 ಬಾತ್ ರೂಮ್ ಹಾಗೂ 6 ಶೌಚಾಲಯಗಳ್ಳು ನಿರ್ಮಿಸಲಾಗಿದೆ. ನೀರು, ಶಬ್ದ ನಿರೋಧಕವಾಗಿರುವ ಆಸ್ಪತ್ರೆ 20 ವರ್ಷಗಳ ಕಾಲ ಬಾಳಿಕೆ ಬರಲಿದೆ. ಅಗತ್ಯವಿದ್ದೆಡೆ ಆಸ್ಪತ್ರೆಯನ್ನು ಸ್ಥಳಾಂತರಿಸಬಹದು. ಆಸ್ಪತ್ರೆಯನ್ನು ಕೋವಿಡ್ ರೋಗಿಗಳ ತತ್ಕಾಲಿಕ ಆರೈಕೆಗೆ ಬಳಕೆ ಮಾಡಬಹುದಾಗಿದೆ. ಜಿಲ್ಲಾಡಳಿತದಿಂದ ಆಕ್ಸಿಜನ್ ಸಿಲಿಂಡರ್ ಹಾಗೂ ಆಕ್ಸಿಜನ್ ಕಾನ್ಸಟ್ರೇಟರ್ಸ್‌ಗಳನ್ನು ನೀಡಲಾಗಿದೆ. ಕೋವಿಡ್ ಅಲೆ ತ್ರೀವ್ರತೆ ಇಳಿದ ಬಳಿಕ ಆಸ್ಪತ್ರೆಯನ್ನು ಲಿಸಿಕಾ ಕೇಂದ್ರ ಸೇರಿದಂತೆ ಇತರೆ ಉದ್ದೇಶಗಳಿಗೆ ಬಳಸಲಾಗುತ್ತದೆ. ಇಕೋ ಇನ್ ಬಾಕ್ಸ್ ಸ್ಪೇಸ್ ಪ್ರೇವ್ಹೇಟ್ ಲಿಮಿಟೆಡ್ ನಿರ್ಮಾಣ ನಿರ್ವಹಣೆಯ ಜವಬ್ದಾರಿ ಹೊತ್ತಿದೆ.
ಈ ಸಂದರ್ಭದಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರಠಾಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.