ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಒಂದು ವಾರದಿಂದ ಕೋವಿಡ್ ಪಾಸಿಟಿವಿಟಿ ದರ ಶೇ.4.1 ರಕ್ಕಿ ಕಡಿಮೆಯಾಗಿದ್ರು ಸಹ ಅನ್ಲಾಕ್ ಆದ ಜಿಲ್ಲೆಗಳ ಪಟ್ಟಿಯಿಂದ ಹೊರಗಿ ಟ್ಟಿರುವ ಕುರಿತಂತೆ ಸರ್ಕಾರಕ್ಕೆ ವರದಿ ನೀಡುವಲ್ಲಿ ಆದ ಲೋಪದೋಷ ಕುರಿತಾಗಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ದೇಶಪಾಂಡೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭಾನುವಾರ ಸಭೆ ನಡೆಸಿದರು.
ಅನ್ಲಾಕ್ 2.0 ಘೋಷಣೆ ಮಾಡುವಾಗ ಸಿಎಂ ಬಿ.ಎಸ್ ಯಡಿಯೂರಪ್ಪ 16 ಜಿಲ್ಲೆಗಳ ಪಟ್ಟಿ ಓದಿದ್ದರು. ಅದರಲ್ಲಿ ಧಾರವಾಡ ಇರಲಿಲ್ಲ. ಅನ್ಲಾಕ್ ಘೋಷಣೆ ಮಾಡುವಾಗ ಸಿಎಂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದರು ಸಹ ಯಾಕೆ ವರದಿ ಸರಿಯಾಗಿ ಕಳುಹಿಸಿ ಕೊಟ್ಟಿಲ್ಲ ಯಾರಿಂದ ತಪ್ಪಾಗಿದೆ ಮತ್ತು ಇದಕ್ಕೆ ಯಾರು ಹೊಣೆಗಾರರು ಎಂಬುದನ್ನು ಸಮಗ್ರವಾಗಿ ಮಾಹಿತಿ ಪಡೆದುಕೊಂಡರು. ಧಾರವಾಡ ಜಿಲ್ಲೆಯಲ್ಲಿ ಸೋಂಕು ಕಡಿಮೆಯಾಗಿರುವ ಬಗ್ಗೆ ಡಿಸಿ ಸಿಎಂಗೆ ಮಾಹಿತಿ ನೀಡಿದ್ದರು. ಆದರೂ, ಸಿಎಂ ಅನ್ಲಾಕ್ ಜಿಲ್ಲೆಗಳ ಪಟ್ಟಿಯಲ್ಲಿ ಸೇರಿಸದಿರುವುದು, ಜಿಲ್ಲೆಯ ಜನರಲ್ಲಿ ಸಾಕಷ್ಟು ಗೊಂದಲಕ್ಕೆ ಒಳಗಾಗಿ ಕಾರಣವಾಗಿತ್ತು.
ಸಭೆಯಲ್ಲಿ ಜಿಲ್ಲಾಧಿಕಾರಿ ನೀತೀಶ ಪಾಟೀಲ, ಜಿಲ್ಲಾ ಆರೋಗ್ಯಧಿಕಾರಿ ಡಾ.ಯಶವಂತ ಮದನಕೇರಿ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಲಾಬುರಾಮ್, ಎಸ್ ಪಿ ಕೃಷ್ಣ ಕಾಂತ ಮುಂತಾದವರಿದ್ದರು.
