ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ.
ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಬ್ಬಂದಿ ಸ್ಥಿತಿ ಗಂಭೀರವಾಗಿದೆ.
ಈ ಹಿಂದೇ ಕೂಡ ವೈದ್ಯಾಧಿಕಾರಿ ಡಾ.ಗೀತಾ ನಾಯಕ ವಿರುದ್ಧ ಗ್ರಾಮಸ್ಥರಿಂದ ಸಾಕಷ್ಟು ದೂರುಗಳು ಕೇಳಿ ಬಂದಿದ್ದು, ಈಗ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಳ್ಳವಷ್ಟರ ಮಟ್ಟಿಗೆ ಬಂದಿದ್ದು, ಈ ಬಗ್ಗೆ ಹಿರಿಯ ಅಧಿಕಾರಗಳು ಆರೋಗ್ಯ ಸಚಿವರು ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ಕ್ರಮಗಳನ್ನು ಜರುಗಿಸಬೇಕಿದೆ.