ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ, ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದ ವಿನಯ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು.
ಜಾಮೀನು ಮಂಜೂರಾಗಿರುವ ಸುದ್ದಿ ಹೋರ ಬಿಳುತ್ತಿದಂತೆ, ಧಾರವಾಡ ನಗರದ ಹೆಬ್ಬಳ್ಳಿ ಅಗಸಿಯಲ್ಲಿ ಜಮಾಯಿಸಿದ ವಿನಯ ಬೆಂಬಲಿಗರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚ್ಚಿಕೊಂಡು, ಕುಣಿದು ಸಂಭ್ರಮಿಸಿದರು.
ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಕಳೆದ ಅಗಸ್ಟ್ 11 ರಂದು ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ವೇಳೆ ವಿನಯ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ಆದರೆ ಅಂದು ಕೇವಲ ಕೊಲೆ ಪ್ರಕರಣದಲ್ಲಿ ಮಾತ್ರ ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಆದರೆ ಇಂದು ಅದೇ ಕೊಲೆ ಪ್ರಕರಣದ ಸಾಕ್ಷಿ ನಾಶ ಪ್ರಕರಣದಲ್ಲಿಯು ವಿನಯ ಅವರಿಗೆ ಜಾಮೀನು ಮಂಜೂರಾಗಿದ್ದು, ವಿನಯ ಬೆಂಬಲಿಗರಲ್ಲಿ ಮತ್ತಷ್ಟು ಖುಷಿ ಹೆಚ್ಚು ಮಾಡಿದೆ.

Hubli News Latest Kannada News